ಬೆಳಗಾವಿ: ಪಿಡಿಒ ಮೇಲೆ ಹಲ್ಲೆ ಮಾಡಿದವರ ಮೇಲೆ ಕ್ರಮಕ್ಕೆ ಒತ್ತಾಯಿಸಿ ನಗರದಲ್ಲಿ ಪಿಡಿಒ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳು ಪ್ರತಿಭಟನೆ
ಪಿಡಿಒ ಮೇಲೆ ಹಲ್ಲೆ ಮಾಡಿದವರ ಮೇಲೆ ಕ್ರಮಕ್ಕೆ ಒತ್ತಾಯಿಸಿ ನಗರದಲ್ಲಿ ಪಿಡಿಒ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ನಕಲಿ ದಾಖಲೆಗಳ ಆಧಾರದ ಮೇಲೆ ಆಸ್ತಿ ಉತಾರ ನೀಡುವಂತೆ ಪಿಡಿಒಗೆ ಪದೇ ಪದೇ ಕಿರುಕುಳ ನೀಡಲಾಗಿತ್ತು ಎಂದು ಮನವಿಯಲ್ಲಿ ದೂರಲಾಗಿದೆ. ಮಾಡಮಗೇರಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಯಗೌಡ ಪಾಟೀಲ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದರೂ, ಅವರನ್ನು ಬಂಧಿಸುವಲ್ಲಿ ಪೊಲೀಸರು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಿಡಿಒ ಸಂಘಟನೆ ಜಿಲ್ಲಾ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿ ಡಿಸಿಗೆ ಮನವಿ ಸಲ್ಲಿಸಿದರು