ಬೆಳಗಾವಿ: ನಾನು ಯಾವುದೇ ಬಲ ಪ್ರದರ್ಶನ ಮಾಡ್ತಿಲ್ಲ: ನಗರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್
ನಾನು ಯಾವುದೇ ಬಲ ಪ್ರದರ್ಶನ ಮಾಡ್ತಿಲ್ಲ ಎಂದು ಡಿ ಕೆ ಶಿವಕುಮಾರ್ ಅವರು ಹೇಳಿದರು. ಡಿನ್ನರ್ ಮೀಟಿಂಗ್ ಮೂಲಕ ಬಲ ಪ್ರದರ್ಶನ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಹಿಂದೆ ಯಾರೂ ಬರುವುದು ಬೇಡ, ನನ್ನ ಪರವಾಗಿ ಯಾರು ಮಾತನಾಡುವುದೂ ಬೇಡ. ನಾನು, ಸಿಎಂ ಸರೇರಿದಂತೆ 140 ಶಾಸಕರೂ ಒಂದೇ ಗುಂಪು ಎಂದು ಹೇಳಿದರು. ಶುಕ್ರವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ ಎಂದು ಹೇಳಿದರು