ಮಂಡ್ಯ: ಡೆಂಗ್ಯೂ ನಿಯಂತ್ರಣ ಮಾಡಲು ಸಹಕರಿಸದವರ ವಿರುದ್ಧ ದಂಡ ವಿಧಿಸಿ: ನಗರದಲ್ಲಿ ಡಿ.ಸಿ ಡಾ.ಕುಮಾರ ಸೂಚನೆ
Mandya, Mandya | Sep 16, 2025 ಡೆಂಗ್ಯೂ ಒಂದು ಸಾಂಕ್ರಾಮಿಕ ರೋಗವಾಗಿದ್ದು ಡೆಂಗ್ಯೂ ನಿಯಂತ್ರಣ ಮಾಡಲು ಸಹಕರಿಸದಿದ್ದರೆ ದಂಡ ವಿಧಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಮಂಗಳವಾರ ಜಿಲ್ಲಾಡಳಿತ , ಜಿ ಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಡಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಡೆಂಗ್ಯೂ ನಿಯಂತ್ರಣ ಸಹಕರಿಸದವರಿಗೆ ಜುಲ್ಮಾನೆ/ದಂಡ ವಿಧಿಸುವ ಕುರಿತು ನಡೆದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮನೆ, ವಾಣಿಜ್ಯ ಸಂಸ್ಥೆಗಳು, ಶಾಲಾ ಕಾಲೇಜು, ಹೋಟೆಲ್, ಕಟ್ಟಡ ನಿರ್ಮಾಣ ಕಾರ್ಯ, ಪಾಳು ಬಿದ್ದ ನಿವೇಶನ, ಖಾಲಿ ನಿವೇಶನಗಳಿಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಎಲ್ಲಾದರೂ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುವ ಸಾಧ್ಯತೆ ಇದೆ ಎಂದರು.