ಚಿತ್ರದುರ್ಗ: ಸೆ. 17 ರಿಂದ ಅ.02 ರವರೆಗೆ ಸ್ವಚ್ಛತೆಯೇ ಸೇವೆ ಪಾಕ್ಷಿಕ ಅಭಿಯಾನ, ನಗರದಲ್ಲಿ ಜಿಲ್ಲಾ ಪಂಚಾಯತ್ ನ ಸಿಇಒ ಆಕಾಶ್ ಪ್ರಕಟಣೆ
ಸೆ. 17 ರಿಂದ ಅ.02 ರವರೆಗೆ ಸ್ವಚ್ಛತೆಯೇ ಸೇವೆ ಪಾಕ್ಷಿಕ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದಾಗಿ ಜಿಲ್ಲಾ ಪಂಚಾಯತ್ ನ ಸಿಇಒ ಪ್ರಕಟಣೆ ನೀಡಿದ್ದಾರೆ. ನೈರ್ಮಲ್ಯ ಮತ್ತು ಶುಚಿತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು “ಸ್ವಚ್ಛತಾ ಹೀ ಸೇವಾ-ಸ್ವಚ್ಛತೆಯೇ ಸೇವೆ ಪಾಕ್ಷಿಕ-2025” ಅಭಿಯಾನದ ಅಂಗವಾಗಿ ಇದೇ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರ್ಯಕ್ರಮ, ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್.ಆಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.