ರಾಯಬಾಗ: ಪಟ್ಟಣದಲ್ಲಿ ತಾಲೂಕಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟಕ್ಕೆ ಶಾಸಕ ದುರ್ಯೋಧನ ಐಹೊಳೆ ಚಾಲನೆ
ಪಟ್ಟಣದಲ್ಲಿ ತಾಲೂಕಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟಕ್ಕೆ ಶಾಸಕ ದುರ್ಯೋಧನ ಐಹೊಳೆ ಚಾಲನೆ ನೀಡಿದರು. ರಾಯಬಾಗ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಶಾಸಕ ದುರ್ಯೋಧನ ಐಹೊಳೆ ಅವರು ಚಾಲನೆ ನೀಡಿದರು. 2025-26 ನೇ ಸಾಲಿನ ತಾಲೂಕಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು. ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆಯಿಂದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಹಾಗೂ ದೈಹಿಕ, ಮಾನಸಿಕ ಸದೃಢತೆಗಾಗಿ ಆಟವಾಡಬೇಕು. ಎಂದು ಹೇಳಿದರು