ಸವದತ್ತಿ: ಪಟ್ಟಣದಲ್ಲಿ 2025-26ನೇ ಸಾಲಿನ ತಾಲೂಕಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಶಾಸಕ ವಿಶ್ವಾಸ ವೈದ್ಯ ಚಾಲನೆ
ಪಟ್ಟಣದಲ್ಲಿ 2025-26ನೇ ಸಾಲಿನ ತಾಲೂಕಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಶಾಸಕ ವಿಶ್ವಾಸ ವೈದ್ಯ ಚಾಲನೆ ನೀಡಿದರು. ಸವದತ್ತಿ ತಾಲೂಕಾ ಕ್ರೀಡಾಂಗಣದಲ್ಲಿ ಮಂಗಳವಾರ 2025-26ನೇ ಸಾಲಿನ ತಾಲೂಕಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಶಾಸಕ ವಿಶ್ವಾಸ ವೈದ್ಯ ಅವರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು. ಕ್ರೀಡೆಗಳು ಶೈಕ್ಷಣಿಕ ಬದುಕಿನ ಒಂದು ಅವಿಭಾಜ್ಯ ಅಂಗ. ಕೇವಲ ಪುಸ್ತಕದ ಜ್ಞಾನದಿಂದ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣವಾಗದು. ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಭೇಕು ಎಂದು ಹೇಳಿದರು