ಕ್ಷಯ ರೋಗಿಗಳು ಸೂಕ್ತ ಚಿಕಿತ್ಸೆ ಪಡೆದು ಪೌಷ್ಟಿಕ ಆಹಾರ ಸೇವನೆ ಮಾಡುವುದರಿಂದ ಈ ರೋಗದಿಂದ ಸಂಪೂರ್ಣವಾಗಿ ಗುಣಮುಖರಾಗಬಹುದು ಎಂದು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಸುಧಾ ತಿಳಿಸಿದರು. ಪಟ್ಟಣದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆರೋಗ್ಯ ಇಲಾಖೆ ಹಾಗೂ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಏರ್ಪಡಿಸಿದ್ದ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರದ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ರೋಗಿಯು ವೈದ್ಯರ ಸಲಹೆಯಂತೆ ನಿಯಮಿತವಾಗಿ ಪ್ರತಿ ತಿಂಗಳು ತಪಾಸಣೆ ಮಾಡಿಸಿಕೊಳ್ಳಬೇಕಿದೆ. ಇದು ಸಾಂಕ್ರಾಮಿಕ ರೋಗವಾಗಿದೆ ಎಂದರು.