ಚಿತ್ರದುರ್ಗ: ಚಿತ್ರದುರ್ಗ ಹಾಗೂ ಹೊಳಲ್ಕೆರೆ ಬಾಗದಲ್ಲಿ ಮಂಗಳವಾರ ವಿಧ್ಯುತ್ ವ್ಯತ್ಯಯ, ನಗರದಲ್ಲಿ ಬೆಸ್ಕಾಂ ಪ್ರಕಟಣೆ
ಚಿತ್ರದುರ್ಗ ಹಾಗೂ ಹೊಳಲ್ಕೆರೆ ಬಾಗದಲ್ಲಿ ಮಂಗಳವಾರ ವಿಧ್ಯುತ್ ವ್ಯತ್ಯಯ ಉಂಟಾಗಲಿದ್ದಾಗಿ ಬೆಸ್ಕಾಂ ಪ್ರಕಟಣೆ ನೀಡಿದೆ. ಸೋಮವಾರ ಮಧ್ಯಾಹ್ನ 2 ಗಂಟೆಗೆ ಬೆಸ್ಕಾಂ ಮಾಹಿತಿ ನೀಡಿದೆ. ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ, ಚಿತ್ರದುರ್ಗ 66/11 ಕೆ.ವಿ ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ, ಅರಸನಘಟ್ಟ ವಿ.ವಿ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಗಳಿಗೆ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ವಿಧ್ಯುತ್ ವ್ಯತ್ಯಯ ಉಂಟಾಗಲಿದೆ