ವಿಕಲಚೇತನರ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ
==================
ಯಾದಗಿರಿ, ನವೆಂಬರ್.23: 2026ರ ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿಕಲಚೇತನರಿಗಾಗಿ ಆಯೋಜಿಸಲಾಗಿದ್ದ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಇಂದು ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಯಶಸ್ವಿಯಾಗಿ ನಡೆದವು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ತಿಪ್ಪಣ್ಣ ಸಿರಸಗಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಶರಣಪ್ಪ ಪಾಟೀಲ್, ಸಾಹೇಬ್ ಜಾನಿ, ಅಜಿತ್ ದೋಖಾ ಹಾಗೂ ವಕೀಲರಾದ ಸುಭಾಷ್ ರಾಂಪೂರಕರ್ ಅವರು ಜಂಟಿಯಾಗಿ ಹಸಿರು ನಿಶಾನೆ ತೋರಿಸುವ ಮೂಲಕ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ವಿಕಲಚೇತನರು ಅತ್ಯಂತ ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕ ಸಿಬ್ಬಂದಿ, ಆರೋಗ್ಯ ಇಲಾಖೆ ಹಾಗೂ ಡಿ.ಡಿ.ಆರ್.ಸಿ ಸಿಬ್ಬಂದಿ ವರ್ಗದವರು, ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವಿವಿಧ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಅಲ್ಲದೆ, ಇಲಾಖೆಯ ಗ್ರಾಮೀಣ, ನಗರ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಮತ್ತು ವಿಕಲಚೇತನರ ಸಹಾಯವಾಣಿ ಕೇಂದ್ರದ ಸಿಬ್ಬಂದಿ ವರ್ಗದವರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Yadgir, Yadgir | Nov 23, 2026