ಕಾಳಗಿ: ಬೆಣ್ಣೆತೋರ ಜಲಾಶಯದಿಂದ ನೀರು ಬಿಡುಗಡೆ, ಹೆಬ್ಬಾಳ ಗ್ರಾಮ ಸಂಪೂರ್ಣ ಜಲಾವೃತ: ಮನೆಗಳಿಗೆ ನೀರು ನುಗ್ಗಿ ಅವಾಂತರ
ಕಲಬುರಗಿ : ಕಲಬುರಗಿ ಜಿಲ್ಲೆಯಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆ ಮುಂದುವರಿದಿದ್ದು, ಬೆಣ್ಣೆತೋರ ಜಲಾಶಯದಿಂದ ನೀರು ಬಿಟ್ಟ ಪರಿಣಾಮ ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಹಳೆ ಹೆಬ್ಬಾಳ ಗ್ರಾಮ ಸಂಪೂರ್ಣ ಜಲಾವೃತವಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.. ಸೆ22 ರಂದು ಬೆಳಗ್ಗೆ 9 ಗಂಟೆಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.. ಜಲಾಶಯದಿಂದ 55 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ ಪರಿಣಾಮ ಹಳೆ ಹೆಬ್ಬಾಳ ಗ್ರಾಮದ ಮನೆಗಳಿಗೆ ನೀರು ನುಗ್ಗಿ ದವಸಧಾನ್ಯಗಳು, ದಿನಸಿ ವಸ್ತುಗಳು ಸಹಿತ ಅನೇಕ ವಸ್ತುಗಳು ನೀರು ಪಾಲಾಗಿ ಜನ ದಿಕ್ಕು ತೋಚದಂತಾಗಿದಾರೆ