ಮಸ್ಕಿ: ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಚುನಾವಣಾ ಅಧಿಕಾರಿ ಜಗದೀಶ್ ಗಂಗಣ್ಣನವರ
Maski, Raichur | Mar 26, 2024 ಲೋಕಸಭಾ ಚುನಾವಣೆ ಹಿನ್ನೆಲೆ ಮಸ್ಕಿ ಪಟ್ಟಣದ ದೇವನಾಂಪ್ರಿಯ ಅಶೋಕ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಸ್ಥಾಪಿಸಿರುವ ಮತಗಟ್ಟೆ ಮತ್ತು ಸ್ಟ್ರಾಂಗ್ ರೂಮ್ಗಳನ್ನು ಸಹಾಯಕ ಚುನಾವಣಾ ಅಧಿಕಾರಿ ಜಗದೀಶ್ ಗಂಗಣ್ಣನವರ್ ಮಾ. 26ರ ಮಂಗಳವಾರ ಪರಿಶೀಲನೆ ನಡೆಸಿದರು. ಕೊಪ್ಪಳ ಕ್ಷೇತ್ರದ ಇವಿಎಂ ಸಂಗ್ರಹಿಸುವ ಸ್ಟ್ರಾಂಗ್ ರೂಮ್ ಭದ್ರತೆ ಹಾಗೂ ಸಿಸಿ ಕ್ಯಾಮರಾ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತರಬೇಕು. ಚುನಾವಣೆ ಕೆಲಸವನ್ನು ಗೊಂದಲ ಮಾಡಿಕೊಳ್ಳದೆ ನಿಭಾಯಿಸಬೇಕು ಎಂದು ಹೇಳಿದರು.