ದೊಡ್ಡಬಳ್ಳಾಪುರ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕ: ಶ್ರೀ ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ನೂತನ ತಹಶೀಲ್ದಾರ್ ಮಲ್ಲಪ್ಪದೊಡ್ಡಬಳ್ಳಾಪುರದ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕಗೊಂಡಿದ್ದಾರೆ. ಈ ಹಿನ್ನೆಲೆ ಇಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಸದಸ್ಯ ರಾಮಣ್ಣ, ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಅಭಿವೃದ್ಧಿ ಪ್ರಧಿಕಾರದ ಸದಸ್ಯ ಆರ್.ವಿ ಮಹೇಶ್, ದೊಡ್ಡಬಳ್ಳಾಪುರ ಕೃಷಿ ಸಮಾಜದ ಆಧ್ಯಕ್ಷ ಆರ್.ಮುರುಳಿಧರ್, ಸೇರಿದಂತೆ ಇತರರು ಉಪಸ್ಥಿತರಿದ್ದರು