ಸ್ವಚ್ಛತೆಗೆ ಪ್ರಮುಖ ಆದ್ಯತೆ ನೀಡುವ ದೃಷ್ಟಿಯಿಂದ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾಕಷ್ಟು ಸಾಮೂಹಿಕ ಸ್ವಚ್ಛತೆ ಕಾರ್ಯವನ್ನು ನಡೆಸಿಕೊಂಡು ಬಂದಿದೆ. ಮುಂದುವರೆದು, ಉಪಮುಖ್ಯಮಂತ್ರಿಗಳ ಸೂಚನೆಯಂತೆ ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ, ನಗರದ ನೈರ್ಮಲ್ಯ ಕಾಪಾಡುವ ದೃಷ್ಟಿಯಿಂದ ಸ್ಥಳ ತಪಾಸಣೆಗಳನ್ನು ನಡೆಸಿ, ಅಧಿಕಾರಿಗಳಿಗೆ ಸ್ವಚ್ಛತಾ ಕಾರ್ಯಗಳನ್ನು ನಡೆಸಲು ಸೂಚಿಸಲಾಗಿದೆ. ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ರವರು ಪ್ರಸ್ತುತ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರಮುಖ ರಸ್ತೆಗಳನ್ನು ಆಯ್ಕೆ ಮಾಡಿಕೊಂಡು ಸುಮಾರು 110 ಕಿ.ಮೀ. ವಿಸ್ತೀರ್ಣದ ರಸ್ತೆ ಹಾಗೂ ಪಾದಚಾರಿ ಮಾರ್ಗ ಸ್ವಚ್ಛತೆ ಗುರಿಯನ್ನು ಅಧಿಕಾರಿಗಳಿಗೆ ನೀಡಲಾಗಿದೆ