ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರಾ ಅಥವಾ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರಾ ಎಂಬ ಕುತೂಹಲ ಮುಂದುವರೆದಿದೆ. ಇದರ ನಡುವೆ ರಾಜ್ಯದ ಆಡಳಿತ ಸಂಪೂರ್ಣ ನೆಲಕಚ್ಚಿದೆ ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೈತರ ಆತ್ಮಹತ್ಯೆ ನಿರಂತರವಾಗಿ ನಡೆಯುತ್ತಿದೆ. ರಾಜ್ಯದ ರಸ್ತೆಗಳು ಸಂಪೂರ್ಣವಾಗಿ ಗುಂಡಿಬಿದ್ದು ಹೋಗಿವೆ. ಪರಿಹಾರ ಇನ್ನೂ ರೈತರ ಕೈಗೆ ಸೇರಿಲ್ಲ ಎಂದು ವಿವರಿಸಿದರು. ಯಾವುದೇ ಖಾಲಿ ಹುದ್ದೆಗೆ ನೇಮಕಾತಿ ಆಗುತ್ತಿಲ್ಲ. ಸರಕಾರದ ಬಳಿ ಹಣ ಇಲ್ಲ.