ಬಳ್ಳಾರಿ: ಸೆಪ್ಟೆಂಬರ್ 15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಸತ್ತಿಗೆ ಚಾಲನೆ
ಸೆಪ್ಟೆಂಬರ್ 15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಯುವ ಸಂಸತ್ತು ಸಭೆಗಳಿಗೆ ಚಾಲನೆ ನೀಡಲಾಗುತ್ತಿದೆ. ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಬೆಳಿಗ್ಗೆ 10.30 ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಕೋರಿದೆ.