ತಳಕು ಗ್ರಾಮದಲ್ಲಿ ಸರಣಿ ಕಳ್ಳತನ ಮಾಡಿದ್ದ ಕಳ್ಳನನ್ನ ಪೊಲೀಸರು ಬಂಧಿಸಿದ್ದಾರೆ.ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ,ಬರೋಬ್ಬರಿ 7 ಅಂಗಡಿ ಬೀಗ ಎಗರಿಸಿ ಕಳವು ಮಾಡಲಾಗಿತ್ತು. ಬಾಲರಾಜ್ ಅಲಿಯಾಸ್ ಪಂಡ್ರಹಳ್ಖಿ ಬಾಲೂ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 5 ಸಾವಿರ ನಗದು ಹಣ 13 ಸಾವಿರ ಮೌಲ್ಯದ ಗುಟ್ಕಾ ವಶಕ್ಕೆ ಪಡೆಯಲಾಗಿದೆ. ಸಿಪಿಐ ಹನುಮಂತಪ್ಪ, ಪಿಎಸ್ಐ ಶಿವಕುಮಾರ್ ನೇತೃತ್ವದಲ್ಲಿ ಆರೋಪಿಯನ್ನ ಅರೆಸ್ಟ್ ಮಾಡಲಾಗಿದೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.