ಗೋಕಾಕ್: ಜಿಲ್ಲಾ ಕೇಂದ್ರ ಘೋಷಣೆಗಾಗಿ ನಾಳೆ ಗೋಕಾಕ್ ಬಂದ್ ಎಂದು ಮುರುಘರಾಜೇಂದ್ರ ಸ್ವಾಮೀಜಿ ಅವರು ಹೇಳಿದರು. ಡಿ.8ರಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಬಹೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ್ ಅನ್ನು ಜಿಲ್ಲಾ ಕೇಂದ್ರವನ್ನಾಗಿ ರಚಿಸಬೇಕೆಂದು ನಾಳೆ ಬಂದ್ ಕರೆಯಲಾಗಿದೆ. ಈ ಬಂದ್ ಗೆ ಸಾರ್ವಜನಿಕರು ಸಹಕರಿಸಬೇಕೆಂದು ಹೇಳಿದರು ಮಂಗಳವಾರ ಗೋಕಾಕ ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಗೋಕಾಕ್ ಜಿಲ್ಲಾ ಕೇಂದ್ರ ರಚನೆ ಮಾಡಬೇಕೆಂದು ಡಿ.3ರಂದು ಗೋಕಾಕ್ ಬಂದ್ ಗೆ ಕರೆ ನೀಡಲಾಗಿದೆ ಎಂದು ಗೋಕಾಕ್ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದರು