ನೀರಿನ ಕೊರತೆಗೆ ಬೆಸತ್ತ ಕಾಳಗಿ ತಾಲೂಕಿನ ರೂಮ್ಮನಗೂಡ ಗ್ರಾಮದ ಮಹಿಳೆಯರು ಹಾಗೂ ಗ್ರಾಮಸ್ಥರು ಗ್ರಾಪಂ ಆವರಣದಲ್ಲಿ ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ಸುಮಾರು 6 ತಿಂಗಳಿಂದ ನೀರಿನ ಸಮಸ್ಯೆ ಎದುರಾಗಿದ್ದು, ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಪಿಡಿಓ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಕಿಡಿಕಾರಿದರು. ತಾಲೂಕ ಪಂಚಾಯತ ಇಓ ಅವರಿಗೆ ಮನವಿ ಪತ್ರ ಸಲ್ಲಿಸಿ ತಕ್ಷಣ ನೀರಿನ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿದರು. ಬುಧವಾರ 2 ಗಂಟೆಗೆ ಪ್ರತಿಭಟನೆ ನಡೆಯಿತು....