BREAKING NEWS || ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ತಾಯಿ–ಮಗಳು ನಾಪತ್ತೆ
ವಿಜಯನಗರ: ತುಂಗಭದ್ರಾ ನದಿಯ ಸ್ನಾನಘಟ್ಟದಲ್ಲಿ ಸ್ನಾನ ಮಾಡಲು ತೆರಳಿದ್ದ ತಾಯಿ ಹಾಗೂ ಮಗಳು ನಾಪತ್ತೆಯಾಗಿರುವ ಘಟನೆ ಹಂಪಿ ಪ್ರವಾಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆ ತಿಳಿದು ಸ್ಥಳಕ್ಕೆ ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಪತ್ತೆಯಾಗಿರುವ ತಾಯಿ–ಮಗಳನ್ನು ಶೀಘ್ರವಾಗಿ ಪತ್ತೆಹಚ್ಚಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಕ್ತ ಸಲಹೆ–ಸೂಚನೆಗಳನ್ನು ನೀಡಿದರು.
ನಾಪತ್ತೆಯಾದವರ ಪತ್ತೆಗಾಗಿ ಪೊಲೀಸ್ ಸಿಬ್ಬಂದಿಯಿಂದ ಶೋಧ ಕಾರ್ಯ ಮುಂದುವರಿದಿದೆ.
#112Vijayanagara #IGPBallari #KarnatakaStatePolice #DGPKarnataka #VijayanagaraPolice #Hampi #TungabhadraRiver #SearchOperation #Police