ಸಿದ್ದಾಪುರ : ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಹಿರಿಯ ಸಾಹಿತಿ ತಮ್ಮಣ್ಣ ಬೀಗಾರ್ ಅವರನ್ನು ಅವರ ನಿವಾಸಕ್ಕೆ ಗುರುವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ತೆರಳಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಿ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಧ್ಯಕ್ಷ ಎಂ.ಆರ್. ಕುಲಕರ್ಣಿ, ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ್ ಕಸಾಪ ತಾಲೂಕು ಅಧ್ಯಕ್ಷ ಚಂದ್ರಶೇಖರ್ ನಾಯ್ಕ ಕುಂಬ್ರಿಗದ್ದೆ , ಕಸಾಪ ಕೋಶಾಧ್ಯಕ್ಷ ಪಿ. ಬಿ. ಹೊಸೂರ, ಗೌರವ ಕಾರ್ಯದರ್ಶಿ ಅಣ್ಣಪ್ಪ ಶಿರಳಿಗೆ ಮತ್ತು ಪ್ರಶಾಂತ ಶೇಟ್ ಮೊದಲಾದವರು ಉಪಸ್ಥಿತರಿದ್ದರು.