ಬೀದರ್: ಶಿಕ್ಷಣ ಸಂಸ್ಥೆಗಳ ಆವರಣದಿಂದ 100 ಮೀಟರವರೆಗೆ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ- ನಗರದಲ್ಲಿ ಎಡಿಸಿ ಶಿವಾನಂದ ಕರಾಳೆ
Bidar, Bidar | Sep 16, 2025 ಬೀದರ್ : ಜಿಲ್ಲೆಯ ಶಾಲಾ ಕಾಲೇಜುಗಳ ಆವರಣದಿಂದ 100 ಮೀಟರ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದ್ದು, ಜಿಲ್ಲೆಯ ಯಾವುದೇ ಶಾಲೆಯ ಆವರಣದಲ್ಲಿ ಕಂಡುಬAದಲ್ಲಿ ತಕ್ಷಣವೇ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲಾಧಿಕಾರಿಗಳಾದ ಶಿವಾನಂದ ಕರಾಳೆ ತಿಳಿಸಿದರು. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.