ಸರಕಾರದ ಸೌಲಭ್ಯಕ್ಕಾಗಿ ಹಕ್ಕಿ ಪಿಕ್ಕಿ ಸಮಾಜ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಖಾನಾಪುರ ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವ ಹಕ್ಕಿ ಪಿಕ್ಕಿ ಸಮಾಜದವರು ಗಡ್ಡೆಗೆಣಸು ತಿಂದು ಜೀವನ ಸಾಗಿಸುತ್ತಿರುವುದಾಗಿ ತಿಳಿಸಿದರು. ಸರ್ಕಾರದಿಂದ ಯಾವುದೇ ಸೌಲಭ್ಯ ಕಲ್ಪಿಸಿಲ್ಲ, ಮುಖ್ಯವಾಗಿ ಚುನಾವಣೆ ಗುರುತಿನ ಚೀಟಿ, ಆಧಾರ್ ಗುರುತಿನ ಚೀಟಿ, ಜಾತಿ ಪ್ರಮಾಣಪತ್ರ ನೀಡುತ್ತಿಲ್ಲ ಎಂದು ಆಗ್ರಹಿಸಿದರು. ಗುರುವಾರ ಬೆಳಗಾವಿಯ ಸುವರ್ಣ ಗಾರ್ಡನ್ ಬಳಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಹಕ್ಕಿ-ಪಿಕ್ಕಿ ಸಮಾಜದವರು ಪ್ರತಿಭಟನೆ ನಡೆಸಿದರು.