ಶಿವಮೊಗ್ಗ: ಬನ್ನಿಕೆರೆ ಗ್ರಾಮದಲ್ಲಿ ವೈಯಕ್ತಿಕ ಕಾರಣಕ್ಕೆ ಸ್ನೇಹಿತನಿಂದಲೇ ಮಚ್ಚಿನಿಂದ ಹಲ್ಲೆ
ಮನೆಯಲ್ಲಿ ಯಾರೂ ಇಲ್ಲದ ವೇಳೆ ಸ್ನೇಹಿತನನ್ನ ಮನೆಗೆ ಕರೆಸಿ, ಮಲಗಿದ್ದ ವೇಳೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ತಾಲೂಕಿನ ಬನ್ನಿಕೆರೆ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದ್ದು,ಶನಿವಾರ ಈ ಕುರಿತಾದ ಮಾಹಿತಿ ಲಭ್ಯವಾಗಿದೆ. ಶಿವನಾಯ್ಕ್ ಹಾಗೂ ಆತನ ಸ್ನೇಹಿತ ಹರೀಶ್ ಇಬ್ಬರ ನಡುವೆ ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿದೆ. ಶಿವನಾಯ್ಕ್ ಮನೆಯಲ್ಲಿ ಯಾರು ಇಲ್ಲವೆಂದು ಹರೀಶ್ ನನ್ನ ಕರೆಸಿಕೊಂಡಿದ್ದಾನೆ. ಮನೆಯಲ್ಲಿ ಕುಡಿದ ಮತ್ತಿನಲ್ಲಿ ಹರೀಶ್ ಮಲಗಿದ್ದ ವೇಳೆ ಮಚ್ಚಿನಿಂದ ಶಿವನಾಯ್ಕ್ ಹರೀಶ್ನ ತಲೆ ಭಾಗಕ್ಕೆ ಹಲ್ಲೆ ಮಾಡಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಹರೀಶ್ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.