ಕಲಘಟಗಿ ತಾಲೂಕು ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮದ್ಯ ನಿಷೇಧ ಆಂದೋಲನ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲೆಯ ವಿವಿಧ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.