ಕಾರವಾರ: ಗಾಂಜಾ ಸೇವನೆ ನಗರದಲ್ಲಿ ಓರ್ವನ ಬಂಧನ, ಎನ್ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು
ನಗರದ ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಮಾದಕ ವಸ್ತುವನ್ನು ಸೇವನೆ ಮಾಡಿ ಅಮಲಿನಲ್ಲಿ ಸುತ್ತಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿ ವೈದ್ಯಕೀಯ ಪರೀಕ್ಷೆಯಲ್ಲಿ ಆತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆತನ ವಿರುದ್ಧ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬುಧವಾರ ಸಂಜೆ 6.30ಕ್ಕೆ ಮಾಹಿತಿ ಮಾಧ್ಯಮಕ್ಕೆ ಲಭ್ಯವಾಗಿದೆ. ಹಬ್ಬುವಾಡದ ಇಬ್ರಾಹಿಂ ಚೂಪದಾರ ಎನ್ನುವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.