ಅಗ್ನಿಶಾಮಕ ಠಾಣೆ ಇಲ್ಲದ ಕಾರಣ ದೂರದಿಂದ ಅಗ್ನಿಶಾಮಕ ವಾಹನಗಳು ಬರಲು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಈವರೆಗೆ ಕೊಟ್ಟರ ಮೌಲ್ಯದ ಆಸ್ತಿಪಾಸ್ತಿ ಹಾನಿ ಸಂಭವಿಸಿದ್ದು ಅಗತ್ಯತೆಯನ್ನು ಗಂಭೀರ ಪರಿಗಣಿಸಿ ಮಂಜೂರು ಮಾಡುವಂತೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಮಂಗಳವಾರ ಬೆಳಿಗ್ಗೆ 10:45 ಕ್ಕೆ ಮನವಿ ಮಾಡಿದರು. ಶಾಸಕರ ಪ್ರಶ್ನೆಗೆ ಸಚಿವರು ಸಕಾರಾತ್ಮಕ ಸ್ಪಂದಿಸಿದರು.