ಕಾರವಾರ: ಸರಕಾರಿ ಗೋಶಾಲೆ ಕಾಮಗಾರಿ ಹೆಸರಿನಲ್ಲಿ ಲಕ್ಷಾಂತರ ರೂ. ಅವ್ಯವಹಾರ ಕ್ರಮಕ್ಕೆ ಆಗ್ರಹಿಸಿದ ಹಿಂದೂ ಜನಜಾಗೃತಿ ಸಮಿತಿ
ಕಣಸಗಿರಿಯಲ್ಲಿ ನಿರ್ಮಾಣ ಮಾಡಲಾಗಿರುವ ಸರಕಾರಿ ಗೋಶಾಲೆಯ ಕಾಮಗಾರಿ ವೇಳೆ ಲಕ್ಷಾಂತರ ರೂ. ಅವ್ಯವಹಾರ ನಡೆಸಲಾಗಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯಿಂದ ಬುಧವಾರ ಮಧ್ಯಾಹ್ನ 1ಕ್ಕೆ ನಗರದಲ್ಲಿ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಕ್ರಮಕೈಗೊಳ್ಳದೆ ಇದ್ದರೇ ಹೋರಾಟ ನಡೆಸುವುದಾಗಿ ಹಿಂದೂ ಜನಜಾಗೃತಿ ಸಮಿತಿ ಪದಾಧಿಕಾರಿಗಳು ಒತ್ತಾಯ ಮಾಡಿದ್ದಾರೆ.