ಕೊಪ್ಪಳ: ತಾವು ಕಲಿತ ಸರ್ಕಾರಿ ಶಾಲೆಯ ಉಳಿವಿಗಾಗಿ ಹಳೆ ವಿದ್ಯಾರ್ಥಿ ಸಂಘದಿಂದ ಕಾಂಪೌಂಡ್ ನಿರ್ಮಾಣ...!
Koppal, Koppal | Sep 21, 2025 ಕೊಪ್ಪಳ ತಾಲೂಕಿನ ಬಹುದ್ದೂರ್ ಬಂಡಿ ಸರ್ಕಾರಿ ಶಾಲೆಯ ಕಾಂಪೌಂಡ್ ನಿರ್ಮಾಣಕ್ಕೆ ಗ್ರಾಮದ ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ಗ್ರಾಮಸ್ಥರು ಸೇರಿಕೊಂಡು ಸರ್ಕಾರದ ಅನುದಾನಕ್ಕೆ ಕಾಯದೆ ತಾವೇ ದೇಣಿಗೆ ಸಂಗ್ರಹಿಸಿ ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆ. ಗ್ರಾಮಸ್ಥರ ಈ ಒಂದು ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.