ಬಳ್ಳಾರಿ: ಚುನಾವಣಾ ಆಯೋಗದ ಆಯುಕ್ತರ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಬಳ್ಳಾರಿಯಲ್ಲಿ ಸೋಮವಾರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಚುನಾವಣಾ ಆಯೋಗದ ಆಯುಕ್ತ ಜ್ಞಾನೇಶ್ವರ್ ಕುಮಾರ್ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ, ಕೇಂದ್ರ ಸರ್ಕಾರದ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ಪ್ರತಿಭಟನೆಯ ನೇತೃತ್ವವನ್ನು ಅಲ್ಲಂ ಪ್ರಶಾಂತ್ ವಹಿಸಿದ್ದರು.