ಚಿಂಚೋಳಿ: ಶಿರೋಳ್ಳಿ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವ, ಮನೆಯಿಂದ ಹೊರಗೆ ಓಡಿ ಬಂದ ಗ್ರಾಮಸ್ಥರು
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಶಿರೋಳ್ಳಿ ಗ್ರಾಮದಲ್ಲಿ ಭೂಕಂಪನದ ಅನುಭವವಾಗಿದೆ. ಬೆಳಗ್ಗೆ ಸುಮಾರು 8 ಗಂಟೆ ಸಮಯದಲ್ಲಿ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಂಪನದ ತೀವ್ರತೆಯಿಂದ ಬೆಚ್ಚಿಬಿದ್ದ ಗ್ರಾಮಸ್ಥರು ಮಕ್ಕಳು ಹಾಗೂ ಹಿರಿಯರನ್ನು ಕರೆದುಕೊಂಡು ಮನೆಯಿಂದ ಹೊರಬಂದು ಬಯಲು ಪ್ರದೇಶಗಳಲ್ಲಿ ಗ್ರಾಮಸ್ಥರು ನಿಂತಿದ್ದಾರೆ. ಸೋಮವಾರ 5 ಗಂಟೆಗೆ ಸಿಕ್ಕ ಪ್ರಾಥಮಿಕ ಮಾಹಿತಿಯ ಪ್ರಕಾರ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯ ವರದಿ ಆಗಿಲ್ಲ...