ಚಿತ್ರದುರ್ಗ: ನಗರದಲ್ಲಿಂದು ರಸ್ತೆ ಸುರಕ್ಷತಾ ಸಪ್ತಾಹ ಜಾಗೃತಿ ಕಾರ್ಯಕ್ರಮ
ಚಿತ್ರದುರ್ಗ ನಗರದಲ್ಲಿಂದು ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಂಗಳವಾರ ಸಂಜೆ 4 ಗಂಟೆಗೆ ಸುರಕ್ಷತಾ ಸಪ್ತಾಹ-2025 ರ ಅಂಗವಾಗಿ ಪೊಲೀಸ್ ಉಪಾಧೀಕ್ಷಕರು ಚಿತ್ರದುರ್ಗ ಉಪವಿಭಾಗ ರವರ ನೇತೃತ್ವದಲ್ಲಿ ನಗರದ ಎಲ್ಲಾ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ತಂಡದಿಂದ ನಗರದ ಖಾಸಗಿ ಬಸ್ ನಿಲ್ದಾಣ, ಗಾಂಧಿ ವೃತ್ತ ಸೇರಿದಂತೆ ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ವಾಹನ ಸವಾರರಿಗೆ ಸಂಚಾರಿ ನಿಯಮ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ್ದು ವಾಹನ ಸವಾರರು ಸಂಚರಿಸುವಾಗ ಕಡ್ಡಾಯವಾಗಿ ಸಂಚಾರಿ ನಿಯಮ ಪಾಲನೆ ಮಾಡಬೇಕು. ಎಲ್ಲೆಂದರಲ್ಲಿ ವಾಹನಗಳನ್ನ ನಿಲ್ಲಿಸದೆ ಇಲಾಕೆ ನಿಗದಿಪಡಿಸಿದ ಸ್ಥಳದಲ್ಲಿ ಮಾತ್ರ ವಾಹನಗಳನ್ನ ನಿಲ್ಲಿಸಬೇಕು ಎಂದು ಜಾಗೃತಿ ಮೂಡಿಸಿದರು.