ಬೆಂ. ಗ್ರಾ: ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಆರೋಪಿಗಳು ಅರೆಸ್ಟ್ ಬೆಂಗಳೂರು ಗ್ರಾಮಾಂತರದ ಮಾದನಾಯಕನಹಳ್ಳಿಯಲ್ಲಿ ತಡರಾತ್ರಿ ಮನೆಗೆ ನುಗ್ಗಿ ಗಂಡಸರನ್ನು ಕಟ್ಟಿಹಾಕಿ, ಮಹಿಳೆಯನ್ನು ಎಳೆದೊಯ್ದ ಘಟನೆ ಭದ್ರತೆ ಮತ್ತು ಹೆಣ್ಣು ಮಕ್ಕಳ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಎತ್ತಿದೆ. ಈ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಬುಧವಾರ ಸಂಜೆ 7 ಗಂಟೆಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.