ಕುಂದಗೋಳದಲ್ಲಿ ಪಂಚಮಸಾಲಿ ಮೀಸಲಾತಿ ಸಮಾವೇಶಕ್ಕೆ ಆಗಮಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಅಭಿಮಾನಿಗಳು ಗಾಳಿ ಮರೆಮ್ಮ ದೇವಸ್ಥಾನದ ಬಳಿ ಹೂಮಳೆ ಸುರಿಸಿ ಸ್ವಾಗತಿಸಿದರು. ಸಾವಿರಾರು ಅಭಿಮಾನಿಗಳು ಬೈಕ್ ರ್ಯಾಲಿ ಮೂಲಕ ಸ್ವಾಗತಿಸಿ, ನಂತರ ಭವ್ಯ ಮೆರವಣಿಗೆಯಲ್ಲಿ ಸಮಾವೇಶದ ಸ್ಥಳಕ್ಕೆ ಕರೆದೊಯ್ದರು.