ಬೆಂಗಳೂರು ಉತ್ತರ: ಮತದಾರರ ಪಟ್ಟಿ ತಯಾರಿಕಾ ಪ್ರಕ್ರಿಯೆಯನ್ನು ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ನಡೆಸಲು ಸೂಚನೆ : ನಗರದಲ್ಲಿ ಮಹೇಶ್ವರ್ ರಾವ್
ಜಿಬಿಎ ವ್ಯಾಪ್ತಿಯಲ್ಲಿ ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ತಯಾರಿಕಾ ಪ್ರಕ್ರಿಯೆಯನ್ನು ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ನಡೆಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ನಗರದ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್‌ವಾರು ಮತದಾರರ ಪಟ್ಟಿಯ ತಯಾರಿಕೆ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು, ಜಿಬಿಎ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದಿಂದ 22ನೇ ಜನವರಿ 2026ರಂದು ಪರಿಷ್ಕೃತ ಸುತ್ತೋಲೆ ಹೊರಡಿಸಲಾಗಿದ್ದು,