ಮಕ್ಕಳ ಬುದ್ಧಿಮಟ್ಟ ಹೆಚ್ಚಿಸಲು ವಿಜ್ಞಾನ ವಸ್ತು ಪ್ರದರ್ಶನಗಳು ಸಹಕಾರಿ ಲ ದಾಬಸ್ಪೇಟೆ : ವಿಜ್ಞಾನ ಹಾಗೂ ಇತರ ಮಾದರಿಯ ವಸ್ತು ಪ್ರದರ್ಶನ ಗಳನ್ನು ಏರ್ಪಡಿಸುವುದರಿಂದ ಮಕ್ಕಳ ಜ್ಞಾನಾಭಿವೃದ್ಧಿ ಮಟ್ಟ ಹೆಚ್ಚುತ್ತದೆ ಎಂದು ಇಸ್ರೋ ವಿಜ್ಞಾನಿ ಶಂಕರ್ ಮಾಧುಸ್ವಾಮಿ ಹೇಳಿದರು. ಪಟ್ಟಣದ ವಿಕೇರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಏರ್ಪಡಿಸಿದ್ದ ಸ್ಪೆಕ್ಟçಮ್-೨ಕೆ೨೫ ಶೀರ್ಷಿಕೆಯಡಿ ಆಯೋಜಿಸಿದ್ದ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.