ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಾಡಿ, ಕಾಂಗ್ರೆಸ್ ತನ್ನ ವೈಫಲ್ಯ ಮುಚ್ಚಿ ಹಾಕಲು ದ್ವೇಷ ರಾಜಕಾರಣ ಮಾಡಲು ಸದನವನ್ನ ಬಳಸಿಕೊಳ್ಳಲು ಹೊರಟಿದೆ. ಕಾಂಗ್ರೆಸ್ ಪ್ರಜಾಪ್ರಭುತ್ವ ಕಗ್ಗೊಲೆ ಮಾಡುವ ಕೆಲಸ ಮಾಡಿದೆ. ಸದನದ ದುರ್ಬಳಕೆಗೆ ಸರ್ಕಾರ ಮುಂದಾಗಿದ್ದು, ದುರ್ದೈವ. ಕೇಂದ್ರ ಸರ್ಕಾರ ಮನರೇಗಾವನ್ನ ಕೆಲವು ಮಾರ್ಪಾಡು, ಸುಧಾರಣೆ ತಂದಿದ್ದಾರೆ. ಸಿದ್ದರಾಮಯ್ಯ ಹಾದಿಯಾಗಿ ಕಾಂಗ್ರೆಸ್ ಅಪಪ್ರಚಾರ ಮಾಡಲು ಹೊರಟಿದೆ. ಉದ್ಯೋಗ ಖಾತ್ರಿ ಯೋಜನೆ ಬಡವರಿಗೆ ಉಪಯೋಗ ಆಗಲಿ ಅಂತ. ಕಾಂಗ್ರೆಸ್ ಪುಡಾರಿಗಳಿಗಾಗಿ ಅಲ್ಲ. ರಾಜ್ಯಪಾಲರ ಮುಖೇನ ಕೇಂದ್ರದ ವಿರುದ್ಧ ಜನರನ್ನ ಎತ್ತಿಕಟ್ಟುವ ಕೆಲಸ ಮಾಡಲು ಸರ್ಕಾರ ಹೊರಟಿದೆ.