ಶಿವಮೊಗ್ಗ: ಬಪ್ಪನಮನೆ ಗ್ರಾಮದ ಬಳಿ ಕಂದಕಕ್ಕೆ ಉರುಳಿದ ಕೆಎಸ್ಆರ್ಟಿಸಿ ಬಸ್, ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಮನೆ ಸಮೀಪದ ಬಪ್ಪನಮನೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಕೆಎಸ್ಆರ್ಟಿಸಿ ಬಸ್ ಉರುಳಿ ಬಿದ್ದಿರುವ ಘಟನೆ ಸೋಮವಾರ ಜರುಗಿದೆ. ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದಂತಹ ಕೆಎಸ್ಆರ್ಟಿಸಿ ಬಸ್ ಬೆಂಗಳೂರಿನಿಂದ ಭಟ್ಕಳಕ್ಕೆ ತೆರಳ್ಳುತ್ತಿತ್ತು. ಈ ವೇಳೆ ಬಪ್ಪನ ಮನೆ ಗ್ರಾಮದ ಬಳಿ ಎದುರಿಗೆ ಬಂದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಕಂದಕಕ್ಕೆ ಉಳ್ಳಿ ಬಿದ್ದಿದೆ ಈ ಅಪಘಾತದಲ್ಲಿ ಬಸ್ಸಿನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು,ಅವರನ್ನು ನಗರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.