ಕಂಪ್ಲಿ ಮತ್ತು ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಂದ ಕಳೆದುಹೋದ ಮೊಬೈಲ್ ಫೋನ್‌ಗಳನ್ನು CEIR ಪೋರ್ಟಲ್ ಮೂಲಕ ಯಶಸ್ವಿಯಾಗಿ ಪತ್ತೆ ಹಚ್ಚಲಾಗಿದೆ. ಡಿ.13,ಶನಿವಾರ ಸಂಜೆ 6ಕ್ಕೆ ಪತ್ತೆಯಾದ ಮೊಬೈಲ್ ಫೋನ್‌ಗಳನ್ನು ಸಂಬಂಧಿಸಿದ ವಾರಸುದಾರರಿಗೆ ಪೊಲೀಸ್ ಅಧಿಕಾರಿಗಳಿಂದ ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಕಳೆದುಹೋದ ಮೊಬೈಲ್‌ಗಳನ್ನು ಮರಳಿ ಪಡೆಯಲು ಸಹಕಾರ ನೀಡಿದ ಪೊಲೀಸ್ ಇಲಾಖೆ ಹಾಗೂ CEIR ಪೋರ್ಟಲ್‌ಗೆ ಸಾರ್ವಜನಿಕರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.