ವಿದೇಶದಲ್ಲಿ ಉದ್ಯೋಗದ ವೀಸಾ ಕೊಡುವುದಾಗಿ ಆಮಿಷವೊಡ್ಡಿ 289 ಮಂದಿಯಿಂದ ಕೋಟ್ಯಂತರ ರೂ. ವಂಚಿಸಿದ ಮುಂಬೈ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುಂಬೈಯ ದಿಲ್ಶಾದ್ ಅಬ್ದುಲ್ ಸತ್ತಾರ್ ಖಾನ್ (45) ಮತ್ತು ಸಾಹುಕಾರಿ ಕಿಶೋರ್ ಕುಮಾರ್ ಯಾನೆ ಅನಿಲ್ ಪಾಟೀಲ್ (34)ಎಂದು ಗುರುತಿಸಲಾಗಿದೆ. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಪೊಲೀಸರು ಮುಂಬೈ ಮೂಲದ ಮಸೀವುಲ್ಲಾ ಖಾನ್ ಎಂಬಾತನನ್ನು ಬಂಧಿಸಿದ್ದಾರೆ.