ಡಿ.20ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾಲ್ಕಿ: ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 136ನೆಯ ಜಯಂತ್ಯುತ್ಸವ ನಿಮಿತ್ತ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಆರ್.ಸುರೇಂದ್ರನ್ ಹೇಳಿದರು. ಪಟ್ಟಣದ ಭೀಮಣ್ಣ ಖಂಡ್ರೆ ತಾಂತ್ರಿಕ ಮಹಾವಿದ್ಯಾಲಯ(ಬಿಕೆಐಟಿ)ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪಟ್ಟಣದ ಲಿಂಗೈಕ್ಯ ಲಕ್ಷಿö್ಮÃಬಾಯಿ ಭೀಮಣ್ಣ ಖಂಡ್ರೆ ಪಬ್ಲಿಕ್ ಶಾಲೆಯಲ್ಲಿ ಡಿ.20ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಉಚಿತ ಆರೋಗ್ಯ ಶಿಬಿರ ನಡೆಯಲಿದ್ದು, ಸಂಸ್ಥೆಯ ಅಧ್ಯಕ್ಷರು, ಜಿಲ್ಲಾ ಉ