ಶ್ರೀರಂಗಪಟ್ಟಣದ ಗಡಿಭಾಗದಲ್ಲಿ ಭಾರೀ ಗಾತ್ರದ ಹುಲಿ ಪ್ರತ್ಯಕ್ಷ,ವಾಗಿ ಜನರಲ್ಲಿ ಆತಂಕ ಹೆಚ್ಚಿಸಿರುವ ಘಟನೆ ಜರುಗಿದೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಗಡಿಭಾಗದ BEML ಸಮೀಪ ಭಾರೀ ಗಾತ್ರದ ಹುಲಿ ಪ್ರತ್ಯಕ್ಷವಾಗಿದೆ. ಸ್ಥಳೀಯರು ಹುಲಿಯ ದೃಶ್ಯವನ್ನು ತಮ್ಮ ಮೊಬೈಲ್ ಗಳಲ್ಲಿ ಸೆರೆ ಹಿಡಿದಿದ್ದಾರೆ. ಇತ್ತೀಚೆಗೆ ಕುಪ್ಪೆದಡದ ಬಳಿ ಪತ್ತೆಯಾಗಿದ್ದ ಕುರಿಯ ಅರ್ಧಂಬರ್ಧ ತಿಂದ ದೇಹ ಹಾಗೂ ಬೆಮೆಲ್ ಆವರಣದಲ್ಲಿ ಪ್ರತ್ಯಕ್ಷವಾಗಿದ್ದ ಹುಲಿಯ ಘರ್ಜನೆ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಕೂಡಲೇ ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಸಾರ್ವಜನಿಕರು ಸೋಮವಾರ ಮಧ್ಯಾಹ್ನ 2 ಗಂಟೆಯಲ್ಲಿ ಒತ್ತಾಯಿಸಿದ್ದಾರೆ ಆಗ್ರಹಿಸಲಾಗಿದೆ