ಅಣ್ಣಿಗೇರಿ: ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಧಾರವಾಡ 1 ಇವರ ಸಹಯೋಗದಲ್ಲಿ ಭಾರತ ಪ್ರೌಢಶಾಲೆ ಧಾರವಾಡದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ,ಕಲೋತ್ಸವದಲ್ಲಿ ಅಣ್ಣಿಗೇರಿ ಬಾಪೂಜಿ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ನೇತ್ರಾವತಿ ಛಬ್ಬಿ ಕನ್ನಡ ಕವನ ವಾಚನ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.