ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾಗಿ ಆರೋಗ್ಯ ಸೇವೆ ಒದಗಿಸಿ ಎಂದು : ನಗರದಲ್ಲಿ ಕರವೇಯಿಂದ ಎಡಿಸಿಗೆ ಮನವಿ
ಚಾಮರಾಜನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಸರ್ಕಾರಿ ಆರೋಗ್ಯ ಸೇವೆಗಳು ದೊರೆಯುತ್ತಿಲ್ಲ ಎಂದು ಜಿಲ್ಲಾಡಳಿತ ಭವನದಲ್ಲಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಮನವಿ ಸಲ್ಲಿಸಿದರು. ಜಿಲ್ಲಾಸ್ಪತ್ರೆಯಲ್ಲಿ 90 % ರಷ್ಟು ಔಷಧಿಗಳಿ ದೊರೆಯುತ್ತಿಲ್ಲ, ಸರ್ಕಾರಿ ವೈದ್ಯರು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ, ಶಸ್ತ್ರ ಚಿಕಿತ್ಸೆಗಳಿ ರೋಗಿಗಳಿಂದ ವೈದ್ಯರು ಹಣದ ಬೇಡಿಕೆ ಇಡುತ್ತಿದ್ದಾರೆ ಹಾಗೂ ಇತರೆ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹಾರ ಮಾಡಬೇಕೆಂದು ಮನವಿ ಸಲ್ಲಿಸಿದರು