ಚಳ್ಳಕೆರೆ: ನಗರದಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕಗೆ ನುಡಿ ನಮನ ಹಾಗೂ ಗಿಡ ನೆಡುವ ಕಾರ್ಯಕ್ರಮ
ಚಳ್ಳಕೆರೆ:ನಗರದ ಸಾಲುಮರ ತಿಮ್ಮಕ್ಕ ಉದ್ಯಾನವನದಲ್ಲಿ ರೈತ ಸಂಘ, ಕೆ.ಆರ್. ಪಕ್ಷ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಶ್ರದ್ಧಾಂಜಲಿ, ನುಡಿನಮನ ಹಾಗೂ ಗಿಡ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಸಾಲುಮರದ ತಿಮ್ಮಕ್ಕ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಅವರು, ಮಕ್ಕಳಿಲ್ಲ ಎನ್ನುವ ಕೊರಗನ್ನು ಮರೆತು ಗಿಡಗಳನ್ನು ನೆಟ್ಟು ಪೋಷಣೆ ಮಾಡುವ ಮೂಲಕ ಮರಗಿಡಗಳನ್ನು ಸಾಕಿ ಬೆಳೆಸಿದ ಮಹಾನ್ ಕೀರ್ತಿ ಸಾಲುಮರದ ತಿಮ್ಮಕ್ಕ ಹಾಗೂ ಅವರ ಪ