ಮಂಡ್ಯ : ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ, ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟ, ಹಲವು ತಮಿಳು ಕಾಲೋನಿ ನಿವಾಸಿಗಳು ಮಂಡ್ಯ ನಗರಸಭೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಬುಧವಾರ ಮಧ್ಯಾಹ್ನ 12.30 ರ ಸಮಯದಲ್ಲಿ ಮೆರವಣಿಗೆ ಮೂಲಕ ನಗರಸಭೆ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಈ ವೇಳೆ ನಗರಸಭೆ ಮತ್ತು ಜಿಲ್ಲಾ ಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರ ಸಿದ್ದರಾಜು ತಮಿಳು ಕಾಲೋನಿ ಯಲ್ಲಿ ವಾಸಿಸುತ್ತಿರುವ 154 ಕುಟುಂಬಗಳಿಗೆ ಸರ್ಕಾರದ ವಸತಿ ಯೋಜನೆಯ ಅಡಿಯಲ್ಲಿ ಮನೆಗ ಳನ್ನು ಮಂಜೂರು ಮಾಡಿ ಕಾಮ ಗಾರಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.