ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿಯ ನಿಯೋಗ ಇಂದು ಉಡುಪಿಯ ಪೇಜಾವರ ಮಠದಲ್ಲಿ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ, ಏಮ್ಸ್ ಗಾಗಿ ನಡೆಯುತ್ತಿರುವ ಸುಧೀರ್ಘ 1290 ದಿನಗಳ, ನಾಲ್ಕು ವರ್ಷಗಳ ನಿರಂತರ ಹೋರಾಟದ ಬಗ್ಗೆ ವಿವರಿಸುತ್ತಾ, ಪ್ರಧಾನ ಮಂತ್ರಿಗಳಿಗೆ ಚರ್ಚಿಸಿ ದಿವ್ಯ ಮಧ್ಯಸ್ಥಿಕೆ ವಹಿಸಬೇಕೆಂದು ಮನವಿ ಪತ್ರ ನೀಡಿದರು. ಹಿಂದುಳಿದ ಮಹತ್ವಕಾಂಕ್ಷಿ ಜಿಲ್ಲೆ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವುದು ಹೆಚ್ಚು ಸೂಕ್ತವಾಗಿದೆ, ರಾಯಚೂರಿಗೆ ಏಮ್ಸ್ ಮಂಜೂರು ಮಾಡುವಂತೆ ಪ್ರಧಾನಮಂತ್ರಿ ಅವರೊಂದಿಗೆ ಚರ್ಚಿಸಿ ನಮ್ಮ ವತಿಯಿಂದ ಪತ್ರವನ್ನು ನೀಡುತ್ತೇವೆ ಎಂದು ತಿಳಿಸಿದರು.