ಸವದತ್ತಿ: ಯಲ್ಲಮ್ಮನಗುಡ್ಡದ ಜಾತ್ರೆ ಹಿನ್ನಲೆ ಸವದತ್ತಿಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಶಾಸಕ ವಿಶ್ವಾಸ ವೈದ್ಯ
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಮುಂಬರುವ 'ಬನದ ಹುಣ್ಣಿಮೆ' ಮತ್ತು 'ಭರತ ಹುಣ್ಣಿಮೆ' ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಶನಿವಾರ 5 ಗಂಟೆಗೆ ಸವದತ್ತಿ ಮತಕ್ಷೇತ್ರದ ಶಾಸಕ ವಿಶ್ವಾಸ್ ವೈದ್ಯ ಯಲ್ಲಮ್ಮನಗುಡ್ಡದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಕ್ಷೇತ್ರದ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಸಲಾಯಿತು. ಕುಡಿಯುವ ನೀರು, ದೀಪಾಲಂಕಾರ,ಸ್ವಚ್ಛತೆ & ಭದ್ರತೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು ವಿಶೇಷವಾಗಿ ಕ್ಷೇತ್ರದ ಪಾವಿತ್ರ್ಯತೆ ಕಾಪಾಡಲು 3 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ & ಮಾಂಸ ಮಾರಾಟ ನಿಷೇಧಿಸಲು ತೀರ್ಮಾನಿಸಲಾಯಿತು.