ಬೆಂಗಳೂರು ಪೂರ್ವ: ನಗರದಲ್ಲಿ ಪಟಾಕಿ ತಾಕಿದಕ್ಕೆ ಸಿಡಿಮಿಡಿ: ಮಾರಕಾಸ್ತ್ರಗಳಿಂದ ಇಬ್ಬರ ಮೇಲೆ ಹಲ್ಲೆ ಮಾಡಿದ ಪುಂಡರ್ ಗ್ಯಾಂಗ್ ಅರೆಸ್ಟ್
ಪಟಾಕಿ ಕಿಡಿ ತಾಕಿದಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು ಬಾಲಕರು ಸೇರಿ ಐವರನ್ನ ಹೆಣ್ಣೂರು ಠಾಣೆ ಪೊಲೀಸರು ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬಂಧಿಸಿದ್ದಾರೆ. ಹಲ್ಲೆಗೊಳಗಾದ ಕಿರಣ್ ಎಂಬುವರು ನೀಡಿದ ದೂರಿನ ಮೇರೆಗೆ ಅಮೀನ್ ಶರೀಫ್, ಸೈಯ್ಯದ್ ಅರ್ಬಾಜ್ ಹಾಗೂ ಸೈಯದ್ ಖಾದರ್ ಎಂಬುವರನ್ನ ಬಂಧಿಸಲಾಗಿದೆ. ಕಾನೂನು ಸಂಘರ್ಷಕ್ಕೆ ಒಳಗಾದ ಇಬ್ಬರನ್ನ ರಿಮ್ಯಾಂಡ್ ಹೋಮ್ ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ಧಾರೆ.