ಬೆಂಗಳೂರು ಕೇಂದ್ರ ನಗರ ಪಾಲಿಕೆ ಸಭಾಂಗಣದಲ್ಲಿ 5ನೇ ರಾಜ್ಯ ಹಣಕಾಸು ಆಯೋಗದ ಮಾನ್ಯ ಅಧ್ಯಕ್ಷರಾದ ಡಾ. ಸಿ. ನಾರಾಯಣಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನೆ ಸಭೆ ಜರುಗಿತು. ಸಭೆಯಲ್ಲಿ ಆಯೋಗದ ಸದಸ್ಯರಾದ ಶ್ರೀ ಮೊಹಮ್ಮದ್ ಸನಾವುಲ್ಲ ಹಾಗೂ ಶ್ರೀ ಆರ್. ಎಸ್. ಫೋಂಡೆ ಉಪಸ್ಥಿತರಿದ್ದರು. ಜೊತೆಗೆ ಪಾಲಿಕೆ ಆಯುಕ್ತರಾದ ಶ್ರೀ ರಾಜೇಂದ್ರ ಚೋಳನ್ ಮತ್ತು ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ದಲ್ಜಿತ್ ಕುಮಾರ್ ಸಭೆಯಲ್ಲಿ ಭಾಗವಹಿಸಿ, ನಗರದ ಅಭಿವೃದ್ಧಿ ಹಾಗೂ ಹಣಕಾಸು ವಿಷಯಗಳ ಕುರಿತು ಚರ್ಚೆ ನಡೆಸಿದರು.