ಧಾರವಾಡ: ಹಿಂದೂಗಳನ್ನು ಕ್ರಿಸ್ಚಿಯನ್ ಧರ್ಮಕ್ಕೆ ಮತಾಂತರ ಮಾಡುವುದು ಖಂಡನೀಯ ಎಂದು ಸ್ಥಳೀಯ ನಿವಾಸಿ ರತನ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಅಧಿಕಾರಿಗಳು ಕ್ರಮವಹಿಸಬೇಕು. ಮತಾಂತರ ಮಾಡುವುದರಿಂದ ನಮ್ಮ ಸಮಾಜಕ್ಕೆ ಅನ್ಯಾಯ ಆಗುತ್ತಿದೆ. ನಮ್ಮ ಸಮಾಜವನ್ನು ಬಿಟ್ಟು ಇನ್ನೊಂದು ಧರ್ಮಕ್ಕೆ ಹೋಗಬಾರದು ಎಂದು ತಿಳಿಸಿದರು.